HomeLatest Newsರಾಜ್ಯದ ಜನತೆ ಗಮನಕ್ಕೆ : ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ರಾಜ್ಯದ ಜನತೆ ಗಮನಕ್ಕೆ : ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು :   ಅರಣ್ಯ ಪ್ರದೇಶದ ಹೊರಗೆ  ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ.

ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂ ಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು ಎಂದು  ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ.

ವೃಕ್ಷೋದ್ಯಾನ ಸಾರ್ವಜನಿಕ ಬಳಕೆಗೆ ಮುಕ್ತ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಯಪ್ಪನಹಳ್ಳಿಯಲ್ಲಿ ಸರ್ಕಾರಿ ಸ್ವಾಮ್ಯದ ಎನ್‌ಜಿಇಎಫ್ ಕಾರ್ಖಾನೆಗೆ ಸೇರಿದ 105 ಎಕರೆ ಜಾಗದ ಪೈಕಿ 65 ಎಕರೆ ಜಾಗದಲ್ಲಿ ವೃಕ್ಷೋದ್ಯಾನ ಅಭಿವೃದ್ಧಿಪಡಿಸಿ, ಮಾರ್ಚ್‌ನಲ್ಲಿ ಮೊದಲ ಹಂತವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಸಚಿವರಾದ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ವೃಕ್ಷೋದ್ಯಾನವನ್ನು ಹಂತ 1, 1ಎ, 1ಬಿ ಮತ್ತು 2 ಹೀಗೆ ನಾಲ್ಕು ಹಂತಗಳಲ್ಲಿ, ₹37.75 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. 1ಎ ಹಂತದ ಕಾಮಗಾರಿ ಆರು ತಿಂಗಳಲ್ಲಿ ಮುಗಿಯಲಿದೆ. ಈ ಜಾಗದಲ್ಲಿ 8,500 ಬಗೆಬಗೆಯ ಮರಗಳಿವೆ. ಇವುಗಳ ವೈಜ್ಞಾನಿಕ ಹೆಸರನ್ನು ಈಗ ಪ್ರದರ್ಶಿಸಲಾಗಿದೆ. ಒಂದೇ ಒಂದು ಮರವನ್ನೂ ಕಡಿಯುವುದಿಲ್ಲ. ಆದರೆ, ಇಲ್ಲಿರುವ ನೀಲಗಿರಿ ಜಾತಿಯ ಮರಗಳನ್ನು ಏನು ಮಾಡಬೇಕೆಂದು ವೈಜ್ಞಾನಿಕವಾಗಿ ಪರಿಶೀಲಿಸಿ, ತೀರ್ಮಾನಿಸಲಾಗುವುದು. ಹಂತ-1ರ ಕಾಮಗಾರಿಗಳಿಗೆ ಅಗತ್ಯವಿದ್ದ ₹11.50 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನʼವನ

ಬೆಂಗಳೂರಿನ ಯಲಹಂಕ ಮಾದಪ್ಪನಹಳ್ಳಿ ಕಾಯ್ದಿಟ್ಟ ಬಳಿಯ 153 ಎಕರೆ ಅರಣ್ಯ ಪ್ರದೇಶದಲ್ಲಿ ʼವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನʼವನ್ನು ₹50.29 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular