HomeLive NewsBIG NEWS : ರಾಜ್ಯದ ಜನತೆ ಗಮನಕ್ಕೆ : ಹೊಸ ವರ್ಷಾಚರಣೆಗೆ ಡಿ.31 ರ ಮಧ್ಯರಾತ್ರಿ...

BIG NEWS : ರಾಜ್ಯದ ಜನತೆ ಗಮನಕ್ಕೆ : ಹೊಸ ವರ್ಷಾಚರಣೆಗೆ ಡಿ.31 ರ ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶ.!

ಬೆಂಗಳೂರು :  ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್‌ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಹೊಸ ವರ್ಷದ ಆಚರಣೆಗೆ ನಾಲ್ಕು ದಿನಗಳಷ್ಟೇ ಬಾಕಿಯಿದ್ದು, ಬೆಂಗಳೂರು ನಗರದಾದ್ಯಂತ ಪೊಲೀಸ್‌ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶ ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಕಾರ್ಯವು ಪ್ರಗತಿಯಲ್ಲಿದೆ ಎಂದು ತಿಳಿಸಿದೆ.

* ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಸೂಚನೆಗಳೇನು?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಬ್, ಕ್ಲಬ್ ಹಾಗೂ ರೆಸ್ಟೋರೆಂಟ್‌ಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಮದ್ಯಪಾನ ಮಾಡಿರಬಾರದು.

ಪಟಾಕಿ ಸಿಡಿಸುವಂತಿಲ್ಲ.

ಕಾನೂನು ಬಾಹಿರ ಪಾರ್ಟಿಗಳಿಗೆ ಅವಕಾಶ ಇಲ್ಲ.

ಪ್ರಚೋದನಕಾರಿ ಹಾಡು ಹಾಕಬಾರದು.

ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು

* ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಸೂಚನೆಗಳೇನು?

ಸ್ಥಳದ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪ್ರವೇಶ ಟಿಕೆಟ್ ಹಾಗೂ ಪಾಸ್ ವಿತರಿಸಬೇಕು.

ಅಪ್ರಾಪ್ತರಿಗೆ ಮದ್ಯ ಪೂರೈಸುವಂತಿಲ್ಲ

ತಪಾಸಣೆ ಬಿಗಿಗೊಳಿಸಬೇಕು

ಸಂಶಯಾಸ್ಪದ ವಸ್ತುಗಳು ಹಾಗೂ ವ್ಯಕ್ತಿಗಳು ಕ೦ಡುಬ೦ದರೆ ಪೊಲೀಸರಿಗೆ ಮಾಹಿತಿ ನೀಡಬೇಕು

ವಿದ್ಯುತ್ ಸಂಪರ್ಕ ಕಡಿತವಾದ ವೇಳೆ ಪರ್ಯಾಯ ವಿದ್ಯುತ್‌ ಸ೦ಪರ್ಕ ವ್ಯವಸ್ಥೆ ಹೊ೦ದಿರಬೇಕು ಎಂದು ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular