HomeLatest Newsರಾಜ್ಯದ ಜನತೆ ಗಮನಕ್ಕೆ : 2026 ನೇ ಸಾಲಿಗೆ ಮಂಜೂರಾದ 'ಸಾರ್ವತ್ರಿಕ ರಜಾ ದಿನಗಳ ಪಟ್ಟಿ'...

ರಾಜ್ಯದ ಜನತೆ ಗಮನಕ್ಕೆ : 2026 ನೇ ಸಾಲಿಗೆ ಮಂಜೂರಾದ ‘ಸಾರ್ವತ್ರಿಕ ರಜಾ ದಿನಗಳ ಪಟ್ಟಿ’ ಹೀಗಿದೆ |Govt Holidays

ಬೆಂಗಳೂರು : ರಾಜ್ಯ ಸರ್ಕಾರ 2026 ನೇ ಸಾಲಿನ ಸಾರ್ವತ್ರಿಕ_ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದೆ. ಸರ್ಕಾರವು 2026ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ.

ಸೂಚನೆ:

  1. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಮಹಾ ಶಿವರಾತ್ರಿ (15.02.2026), ಮಹರ್ಷಿ ವಾಲ್ಮೀಕಿ ಜಯಂತಿ (25.10.2026), ಕನ್ನಡ ರಾಜ್ಯೋತ್ಸವ (01.11.2026) ಹಾಗೂ ನರಕ ಚತುರ್ದಶಿ (08.11.2026) & ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (10.10.2026) ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ.
  2. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ತರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು.
  3. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು.
  4. . ದಿನಾಂಕ:03.09.2026 (ಗುರುವಾರ) ಕೈಲ್ ಮೂಹೂರ್ತ, ದಿನಾಂಕ:18.10.2026 (ಭಾನುವಾರ) ತುಲಾ ಸಂಕ್ರಮಣ ಹಾಗೂ ದಿನಾಂಕ:26.11.2026 (ಗುರುವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular