Murudeshwar Beach : ಪ್ರವಾಸಿಗರೇ ಗಮನಿಸಿ : ‘ ಮುರುಡೇಶ್ವರ ಬೀಚ್’ ಗೆ ಪ್ರವೇಶ ನಿರ್ಬಂಧ

ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಮುರ್ಡೇಶ್ವರ ಅತ್ಯಂತ ಸುಂದರವಾದ ತಾಣಗಳಲ್ಲೊಂದು. ಸದ್ಯ, ನೀವು ಮುರ್ಡೇಶ್ವರ ಕಡೆ ಟ್ರಿಪ್ ಹೊರಟಿದ್ರೆ ಈ ಸುದ್ದಿ ಗಮನಿಸಿ.

ಹೌದು, ಕಳೆದ ಕೆಲವು ದಿನಗಳ ಹಿಂದೆ ಮುರುಡೇಶ್ವರ ಬೀಚ್ ನಲ್ಲಿ ಎರಡು ಸಾವು ಸಂಭವಿಸಿದ್ದು, ಈ ಹಿನ್ನೆಲೆ ಮುರ್ಡೇಶ್ವರ ಬೀಚ್ ಗೆ ಪ್ರವೇಶ ನಿರ್ಬಂಧಿಸಲಾಗಿದೆ. ಬಿಪಾಯ್ ಚಂಡಮಾರುತದ ಹಿನ್ನೆಲೆ ಅಲೆಗಳ ಅಬ್ಬರ ಜೋರಾಗಿದ್ದು, ಕಡಲ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಅಲರ್ಟ್ ಆಗಿದ್ದು, ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿಲಾಗಿದೆ. ಬೀಚ್ ಪ್ರವೇಶಿಸುವ ಎರಡು ಪ್ರವೇಶ ದ್ವಾರಗಳನ್ನು ಕೂಡ ಬಂದ್ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read