
ಹೌದು, ಕಳೆದ ಕೆಲವು ದಿನಗಳ ಹಿಂದೆ ಮುರುಡೇಶ್ವರ ಬೀಚ್ ನಲ್ಲಿ ಎರಡು ಸಾವು ಸಂಭವಿಸಿದ್ದು, ಈ ಹಿನ್ನೆಲೆ ಮುರ್ಡೇಶ್ವರ ಬೀಚ್ ಗೆ ಪ್ರವೇಶ ನಿರ್ಬಂಧಿಸಲಾಗಿದೆ. ಬಿಪಾಯ್ ಚಂಡಮಾರುತದ ಹಿನ್ನೆಲೆ ಅಲೆಗಳ ಅಬ್ಬರ ಜೋರಾಗಿದ್ದು, ಕಡಲ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಅಲರ್ಟ್ ಆಗಿದ್ದು, ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿಲಾಗಿದೆ. ಬೀಚ್ ಪ್ರವೇಶಿಸುವ ಎರಡು ಪ್ರವೇಶ ದ್ವಾರಗಳನ್ನು ಕೂಡ ಬಂದ್ ಮಾಡಲಾಗಿದೆ.

