HomeKarnatakaBREAKING : ಪ್ರವಾಸಿಗರೇ ಗಮನಿಸಿ : ಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ |Nandi Hills

BREAKING : ಪ್ರವಾಸಿಗರೇ ಗಮನಿಸಿ : ಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ |Nandi Hills

ಬೆಂಗಳೂರು :  ಹೊಸ ವರ್ಷಾಚರಣೆಗೆ  ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ.

ನಂದಿ ಬೆಟ್ಟ ಒಂದು ಪುರಾತನ ಕಾಲದ ಕೋಟೆಯಾಗಿದ್ದು, ಇದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇರುವ ಗಿರಿಧಾಮವಾಗಿದೆ. ಚಿಕ್ಕಬಳ್ಳಾಪುರ ಪಟ್ಟಣದಿಂದ 10 ಕಿ.ಮಿ ದೂರದಲ್ಲಿ ಹಾಗು ಬೆಂಗಳೂರು ನಗರದಿಂದ ಸುಮಾರು 45 ಕಿ.ಮಿ ದೂರದಲ್ಲಿದೆ. ವೀಕೆಂಡ್ ಬಂದರೆ ಸಾಕು ನಂದಿಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular