ಪ್ರವಾಸಿಗರೇ ಗಮನಿಸಿ : ನಾಳೆಯಿಂದ ನ. 1ರ ವರೆಗೆ ಚಂದ್ರದ್ರೋಣ ಪರ್ವತದ ಸಾಲಿನ ತಾಣಗಳಿಗೆ ನಿರ್ಬಂಧ.!

ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಮಾಣಿಕಾಧಾರಾ, ಸೀತಾಳಯ್ಯನಗಿರಿ ಸೇರಿ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಬುಧವಾರ ಬೆಳಗ್ಗೆ 10 ಗಂಟೆಯಿಂದ ನವೆಂಬರ್ 1ರ ಬೆಳಗ್ಗೆ 10 ಗಂಟೆವರೆಗೆ ನಿರ್ಬಂಧ ಹೇರಲಾಗಿದೆ.

ಮಲ್ಲೇನಹಳ್ಳಿ ಬಿಂಡಿಗ ದೇವಿರಮ್ಮ ಜಾತ್ರಾ ಮಹೋತ್ಸವದ ಕಾರಣ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದ್ದು, ಈ ಕುರಿತು ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗ ದೇವಿರಮ್ಮ ದೇವಾಲಯದಲ್ಲಿ ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡಲಾಗುತ್ತದೆ. ಭಕ್ತರು ಮೂರು ಸಾವಿರ ಅಡಿ ಬೆಟ್ಟ ಹತ್ತಿ ದೇವರ ದರ್ಶನ ಪಡೆಯುತ್ತಾರೆ. ಈ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮ ಕೈಗೊಂಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read