Ettina Bhuja Peak : ಪ್ರವಾಸಿಗರ ಗಮನಕ್ಕೆ : ಪ್ರಸಿದ್ದ ಪ್ರವಾಸಿ ತಾಣ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹಲವು ಕಡೆ ಧಾರಾಕಾರ ಮಳೆಯಾಗುತ್ತಿರುವುದರಿಂದ ಗುಡ್ಡ ಕುಸಿತ ಉಂಟಾಗುತ್ತಿದೆ. ಅಲ್ಲದೇ ಹಲವು ಕಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ ಆದೇಶದವರೆಗೂ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಮೂಡಿಗೆರೆ ವಲಯ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಅತಿಯಾಗಿ ಮಳೆಯಾಗುತ್ತಿರುವುದರಿಂದ, ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸುತ್ತಿರುವುದರಿಂದ, ರಸ್ತೆಬದಿಯ ವಿದ್ಯುತ್ ಕಂಬಗಳು, ಮರಗಳು ಧರೆಗುರುಳುತ್ತಿದೆ. ಪೋಟೋ ತೆಗೆಯುವ ಸಂದರ್ಭದಲ್ಲಿ ಅಪಾಯಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎತ್ತಿನಭುಜಕ್ಕೆ ಚಾರಣ ಹೋಗುವುದನ್ನು ಮುಂದಿನ ಆದೇಶದ ವರೆಗೂ ತಡೆಹಿಡಿಯಲಾಗಿದೆ ಎಂದು ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read