ಪ್ರವಾಸಿಗರೇ ಗಮನಿಸಿ : ರಾಜ್ಯದ ಈ ಪ್ರೇಕ್ಷಣೀಯ ತಾಣಗಳಿಗೆ ಇದು ನಿರ್ಬಂಧ, ಇಲ್ಲಿದೆ ಮಾಹಿತಿ.!

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ರಾಜ್ಯದ ಈ ಪ್ರೇಕ್ಷಣೀಯ ಸ್ಥಳಗಳಿಗೆ ಇದು ನಿರ್ಬಂಧ ಹೇರಲಾಗಿದೆ.

ಎಲ್ಲೆಲ್ಲಿ ನಿರ್ಬಂಧ.?

1) ನಂದಿಬೆಟ್ಟ
ಸುಪ್ರಸಿದ್ಧ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಡಿಸೆಂಬರ್ 31 ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆಯವರೆಗೆ ನಂದಿ ಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದಾರೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

2) ಚಾಮುಂಡಿ ಬೆಟ್ಟ
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಸಂಜೆ 7 ಗಂಟೆ ನಂತರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದ್ದು, ಜನವರಿ 1 ರಂದು ಎಂದಿನಂತೆ ತೆರಳಬಹುದು.

3) ಕೆಆರ್ ಎಸ್ ಹಿನ್ನೀರು. ಬಲಮುರಿ, ಎಡಮುರಿ, ಕಾವೇರಿ ನದಿ ತೀರಕ್ಕೆ ಜ.1 ರಾತ್ರಿವರೆಗೂ ನಿರ್ಬಂಧ ಹೇರಲಾಗಿದೆ.

4) ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿರ್ಬಂಧ

5) ಚಿಕ್ಕಮಗಳೂರಿನ ಪ್ರಸಿದ್ದ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಇತರೆ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಭಂಧ. ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ತನಕ ಬಂದ್ ಆಗಲಿದೆ.

6) ಪ್ರವಾಸಿಗರಿಗೆ ಗುಡ್ ನ್ಯೂಸ್ ಎಂದರೆ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಕಾರವಾರದ ಮುರುಡೇಶ್ವರ ಕಡಲ ತೀರ 20 ದಿನದಿಂದ ಬಂದ್ ಆಗಿದ್ದು, ಇಂದಿನಿಂದ ಓಪನ್ ಆಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read