HomeKarnatakaಪ್ರವಾಸಿಗರೇ ಗಮನಿಸಿ : ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ |Nandi Hills

ಪ್ರವಾಸಿಗರೇ ಗಮನಿಸಿ : ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ |Nandi Hills

ಬೆಂಗಳೂರು : ಸುಪ್ರಸಿದ್ಧ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಡಿಸೆಂಬರ್ 31 ನಾಳೆ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆಯವರೆಗೆ ನಂದಿ ಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದಾರೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2025 ಜನವರಿ 1 ರಂದು ಬೆಳಿಗ್ಗೆ 06 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅಥಿತಿ ಗೃಹಗಳಿಗೆ ಪ್ರವೇಶವನ್ನೂ ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವಿಂದ್ರ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular