HomeKarnatakaBIG NEWS : ಸಾರಿಗೆ ನೌಕರರ ಗಮನಕ್ಕೆ ; ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ...

BIG NEWS : ಸಾರಿಗೆ ನೌಕರರ ಗಮನಕ್ಕೆ ; ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳ ಪಟ್ಟಿ ಬಿಡುಗಡೆ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ನಿಗಮದ ನೌಕರರು ಮತ್ತು ಅವರ ಅವಲಂಬಿತರು ಪಡೆದ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು CGHS ದರಪಟ್ಟಿಯಲ್ಲಿ ಮರುಪಾವತಿ ಮಾಡಲಾಗುತ್ತಿದೆ.

ಮುಂದುವರೆದು,. ಜಂಟಿ ನಿರ್ದೇಶಕರು (ವೈದ್ಯಕೀಯ) ಆರೋಗ್ಯ ಸೌಧ, ಬೆಂಗಳೂರು ರವರಿಂದ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳ ಇತ್ತೀಚಿನ ಪಟ್ಟಿಯನ್ನು ಪಡೆದಿದ್ದು, ಸದರಿ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ಪಟ್ಟಿಯಲ್ಲಿರುವ ತಿದ್ದುಪಡಿ/ಮಾರ್ಪಾಡುಗಳನ್ನು ಅಳವಡಿಸಿಕೊಂಡು ವೈದ್ಯಕೀಯ ಮರುಪಾವತಿಗೆ ಕ್ರಮವಹಿಸುವಂತೆ ಕೋರಲಾಗಿದೆ. ಪ್ರತಿಯನ್ನು ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು, ಕರಾರಸಾ ನಿಗಮ ರವರ ಮಾಹಿತಿ ಹಾಗೂ ಅಗತ್ಯ ಕ್ರಮಕ್ಕಾಗಿ ಕಳುಹಿಸಿದೆ ಎಂದು ಕಾರ್ಮಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular