ಮಡಿಕೇರಿ : ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ‘ಯುವನಿಧಿ’ ಯೋಜನೆಯಡಿಯಲ್ಲಿ ನೋಂದಾಯಿಸಿರುವ ಆಸಕ್ತ ಯುವನಿಧಿ ಫಲಾನುಭವಿಗಳಿಗೆ ಎರಡು ವಾರಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಫಲಾನುಭವಿಗಳಿಗೆ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮತ್ತಿತ್ತರ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು.
ಆಸಕ್ತ ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಡಿಸೆಂಬರ್, 25 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ ಮಡಿಕೇರಿ ಈ ವಿಳಾಸಕ್ಕೆ ಕಚೇರಿ ವೇಳೆಯಲ್ಲಿ ಪಡೆಯಬಹುದು ಅಥವಾ ಕರೆ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ದೂ.ಸಂ. 7760145784/ 8310738819 ನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್, 25 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಮಡಿಕೇರಿ (ಸಿಡಾಕ್) ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
