ಚಿತ್ರದುರ್ಗ : ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಫೆ.9 ಮತ್ತು 10ರಂದು ಚಿತ್ರದುರ್ಗದ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ವೈಜ್ಞಾನಿಕ ಕೋಳಿ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ 25 ಜನರ ಗುರಿ ನಿಗಧಿಪಡಿಸಲಾಗಿದ್ದು, ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್ ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ ತರುವುದು. ಪರಿಶಿಷ್ಠ ಜಾತಿ ಮತ್ತು ಪರಿಶಷ್ಠ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482943111, 9886002248 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು 18 ಡಿಸೆಂಬರ್ 2025 ರಂದು ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಕೆಲವು ಮಧ್ಯವರ್ತಿಗಳು ಇದರ ದುರುಪಯೋಗ ಪಡೆದುಕೊಂಡು ಶುಶ್ರೂಷಾಧಿಕಾರಿಗಳ ಉದ್ಯೋಗ ಕೊಡಿಸುವುದಾಗಿ ಸಾರ್ವಜನಿಕರಿಗೆ ಆಮಿಷವೊಡ್ಡಿ ಹಣದ ಬೇಡಿಕೆಯಿಡುತ್ತಿರುವುದು ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ಬಂದಿದೆ.
ಸಂಸ್ಥೆಯಲ್ಲಿ ಪಾರದರ್ಶಕ ಹಾಗೂ ನಿಯಮಾನುಸಾರವೇ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಉದ್ಯೋಗ ಕೊಡಿಸುವುದಾಗಿ ನಂಬಿಸುವ ಮಧ್ಯವರ್ತಿಗಳಿಗೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಹಣ ನೀಡಿ ಮೋಸ ಹೋಗಬಾರದು. ಕೆಲಸ ಕೊಡಿಸುವ ಆಮಿಷವೊಡ್ಡಿ ಯಾರಾದರೂ ಹಣ ಕೇಳಿದರೆ, ಅವರ ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊAದಿಗೆ ತಕ್ಷಣವೇ ಸಂಸ್ಥೆಯ ಗಮನಕ್ಕೆ ತರುವಂತೆ ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಬಿ.ವೈ.ಯುವರಾಜರಾಜ್ ತಿಳಿಸಿದ್ದಾರೆ.

