ರಾಜ್ಯದ ಮಹಿಳೆಯರೇ ಗಮನಿಸಿ : ‘KSRTC’ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ‘ಆಧಾರ್ ಕಾರ್ಡ್’ ಫೋಟೋ ಇದ್ರೆ ಸಾಕು.!

ಆಧಾರ್ ಕಾರ್ಡ್‍ನ ಭೌತಿಕ ಪ್ರತಿಯನ್ನು ಕೊಂಡೊಯ್ಯಬೇಕಂತಿಲ್ಲ. ಮಹಿಳೆಯರ ಮೊಬೈಲ್ ಫೋನ್ ನಲ್ಲಿ ಆಧಾರ್‍ನ ಡಿಜಿಟಲ್ ನಕಲು ಅಥವಾ ಆಧಾರ್ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿದ ಆಧಾರ್ ಪಿಡಿಎಫ್‍ನ್ನು ಕಂಡಕ್ಟರ್‍ಗೆ ತೋರಿಸಬಹುದು. ಇದು ಮಹಿಳೆಯರಿಗೆ ಮತ್ತಷ್ಟು ಅನುಕೂಲವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶದಿಂದಾಗಿ ಹಿಂದೆ ದ್ವಿಚಕ್ರ ವಾಹನ ಅಥವಾ ಇತರೆ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಮಹಿಳೆಯರು ಈಗ ಬಸ್ಸುಗಳನ್ನು ಆಶ್ರಯಿಸಿದ್ದಾರೆ. ಇದರ ಜೊತೆಗೆ, ತಮ್ಮ ಕುಟುಂಬದ ಮಹಿಳೆಯರೊಂದಿಗೆ ತೆರಳುವ ಪುರುಷರೂ ಸಹ ಬಸ್ ಪ್ರಯಾಣಕ್ಕೆ ಆದ್ಯತೆ ನೀಡುತ್ತಿದ್ದಾರೆ. ಇದು ಒಟ್ಟಾರೆ ಬಸ್ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಿದ್ದು, ಪುರುಷರಿಂದ ಟಿಕೆಟ್ ದರದಿಂದ ಆದಾಯ ಸಂಗ್ರಹವಾಗಿ ಸರ್ಕಾರದ ಬೊಕ್ಕಸಕ್ಕೆ ಲಾಭ ತಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಹೇಳಿದರು.

ಗೃಹಲಕ್ಷ್ಮಿ ಯೋಜನೆ ಮತ್ತು ಯುವ ನಿಧಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಂತೆ ಗಮನಿಸಿ, ಯಾವುದೇ ಅರ್ಹ ಪಲಾನುಭವಿ ಸರಕಾರದ ಯೋಜನೆಗಳಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

ಗ್ಯಾರಂಟಿ ಯೋಜನೆಗಳ ಸದಸ್ಯ ಸುಧೀರ ಎಸ್. ಬೋಳಾರ ಅವರು ಮಾನತಾಡಿ, ಸಾರ್ವಜನಿಕ ಸಾರಿಗೆಯಲ್ಲಿ ಉಚಿತ ಪ್ರಯಾಣಕ್ಕಾಗಿ ಆಧಾರ್ ಕಾರ್ಡ್‍ನ್ನು ತಮ್ಮ ಮೊಬೈಲ್ ಫೆÇೀನ್‍ನಲ್ಲಿ ತೋರಿಸುವುದು ಪರಿಗಣಿಸಬೇಕು ಎಂದು ಹೇಳಿದರು. ಕೆಲವು ಮಹಿಳೆಯರು ಆಧಾರ್ ಕಾರ್ಡ್ ಪ್ರತಿಯನ್ನು ತಂದಿರುವುದಿಲ್ಲ ಮತ್ತು ಹಣವನ್ನು ಇಟ್ಟು ಕೊಂಡಿರುವುದಿಲ್ಲ ಆದ್ದರಿಂದ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ತೊಂದರೆಯಾಗುತ್ತಿದೆ ಎಂದುರು.

ಸದಸ್ಯರಾದ ಅರವಿಂದ ಏಗನಗೌಡರ ಮಾತನಾಡಿ, ತಡಕೋಡ ಗ್ರಾಮದ ಫಲಾನುಭವಿಗಳು ಪಡಿತರ ಪಡೆಯಲು ಹತ್ತಿರದ ಗ್ರಾಮಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ವೃದ್ಧರು, ಮಹಿಳೆಯರು ಮತ್ತು ಅಶಕ್ತರಿಗೆ ತೀವ್ರ ತೊಂದರೆಯಾಗುತ್ತಿದೆ. ಎರಡು ಸಾವಿರಕ್ಕೂ ಹೆಚ್ಚು ಕುಟುಂಬಗಳ ಪಡಿತರ ಚೀಟಿಗಳಿವೆ. ಗ್ರಾಮದಲ್ಲಿಯೇ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ರಾತ್ರಿ ವಸ್ತಿ ಉಳಿಯುವ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಿಕೊಡಬೇಕೆಂಬುದು ಸಾರಿಗೆ ಇಲಾಖೆ ಅಧಿಕಾರಿಗಳು ಬೇಡಿಕೆ ಇದೆ. ಅನೇಕ ಮಾರ್ಗಗಳಲ್ಲಿ ಚಾಲಕರು ಮತ್ತು ನಿರ್ವಾಹಕರು ರಾತ್ರಿ ವೇಳೆ ಗ್ರಾಮಗಳಲ್ಲಿ ಉಳಿಯಬೇಕಾಗುತ್ತದೆ. ಅವರಿಗೆ ಸೂಕ್ತ ವಸತಿ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಸಾರಿಗೆ ಇಲಾಖೆ ಅಧಿಕಾರಿಗಳು ವಿನಂತಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಭುವನೇಶ ಪಾಟೀಲ ಅವರು ಮಾತನಾಡಿ, ಗ್ರಾಮಗಳಲ್ಲಿರುವ ಪಂಚಾಯಿತಿಗಳಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಡುವುದಾಗಿ ತಿಳಿಸಿದರು. ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಂಬಂಧಿಸಿದ ಇಲಾಖೆಗಳು ಉತ್ತಮವಾಗಿ ಅನುಷ್ಠಾನಗೊಳಿಸುತ್ತಿವೆ. ಗ್ರಾಮೀಣ ಮಟ್ಟದಲ್ಲಿ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಜಿಲ್ಲಾ ಪ್ರಾಧಿಕಾರದ ಉಪಾಧ್ಯಕ್ಷರಾದ ಮುರಗಯ್ಯಾ ವಿರಕ್ತಮಠ, ಸುಧೀರ. ಎಸ್. ಬೋಳಾರ, ರೇಹನ್ ರಝಾ ಐನಾಪೂರಿ, ರತ್ನಾ ತೇಗೂರಮಠ, ಶಾಂತಪ್ಪ ಎಸ್. ಅಕ್ಕಿ ಅವರು ವೇದಿಕೆಯಲ್ಲಿದ್ದರು.ಜಿಲ್ಲಾ ಪ್ರಾಧಿಕಾರದ ಸದಸ್ಯರಾದ ಅರವಿಂದ ಏಗನಗೌಡರ, ವಿನಾಯಕ ಕುರುಬರ, ಬಸಪ್ಪ ಮಹಾಬಳೇಶ್ವರ ಬಾವಕಾರ, ಶಿವಾನಂದ ಭೂಮಣ್ಣವರ, ಸಾವಿತ್ರಿ ಬಸವರಾಜ ಭಗವತಿ, ಗೀತಾ ಥಾವಂಶಿ ಹಾಗೂ ಇತರ ಸದಸ್ಯರು, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read