BIG NEWS : ‘ಯುವನಿಧಿ’ ಫಲಾನುಭವಿಗಳೇ ಗಮನಿಸಿ : ‘ಕೌಶಲ್ಕಾರ್ ಪೋರ್ಟಲ್’ ನಲ್ಲಿ ನೋಂದಣಿ ಕಡ್ಡಾಯ

ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು (ITI), GTTC, CEDOK, KSDC ವತಿಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡುತ್ತಿದ್ದು, ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊAಡು ನೇರ ನಗದು ವರ್ಗಾವಣೆ (DBT) ಮೂಲಕ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಕಡ್ಡಾಯವಾಗಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವೆಬ್ ಸೈಟ್ https://www.kaushalkar.com/app/registration_verify ಲಿಂಕನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಲು ಸೂಚಿಸಿದೆ.

ಕೌಶಲ್ಕಾರ್ ಪೋರ್ಟಲ್ ನಲ್ಲಿ ಯುವನಿಧಿ ಫಲಾನುಭವಿಗಳು ತರಬೇತಿ ಪಡೆದರೆ ನಿರುದ್ಯೋಗ ಭತ್ಯೆ ತಡೆಹಿಡಿಯಲಾಗುತ್ತದೆ ಎಂದು ಭಾವಿಸಿ ಕೌಶಲ್ಕಾರ್ ಪೋರ್ಟಲ್ ನಲ್ಲಿ ನೋಂದಾಯಿಸಲು ಹಿಂಜರಿಯುತ್ತಿರುವುದಾಗಿ ತಿಳಿದು ಬಂದಿದ್ದು, ತರಬೇತಿಯನ್ನು ಪಡೆದರೂ ಸಹ ಸರ್ಕಾರ ನಿಗಧಿಪಡಿಸಿರುವ ಅವಧಿವರೆಗೆ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದೆಂದು ತಿಳಿಸುತ್ತಾ, ಯುವನಿಧಿ ಫಲಾನುಭವಿಗಳು ಕೌಶಲ್ಕಾರ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ತಮಗೆ ಇಚ್ಛೆಯುಳ್ಳ ಕೌಶಲ್ಯ ಹಾಗೂ ಉದ್ಯಮಶೀಲತಾ ತರಬೇತಿಯನ್ನು ಪಡೆದುಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read