BREAKING : ಅತ್ತಿಬೆಲೆ ಪಟಾಕಿ ದುರಂತ : ಮೃತಪಟ್ಟವರ ಸಂಖ್ಯೆ 15 ಕ್ಕೆ ಏರಿಕೆ

ಬೆಂಗಳೂರು : ಅನೇಕಲ್ ಜಿಲ್ಲೆಯ ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿನೇಶ್ ಎಂಬುವವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.

ಅನೇಕಲ್ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದರು. ಹಾಗೂ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿತ್ತು. ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಸಂಬಂಧ ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read