HomeKarnatakaಉದ್ಯೋಗಾಕಾಂಕ್ಷಿಗಳ ಗಮನಕ್ಕೆ ; ಸೆ.07 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ ; ಸೆ.07 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬಳ್ಳಾರಿ :   ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದೊಂದಿಗೆ ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ಸಂಸ್ಥೆಯು ಸಂಡೂರು, ಹೊಸಪೇಟೆ ತಾಲೂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸೆಪ್ಟೆಂಬರ್ 07 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಿದೆ.

 ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಹಾಗೂ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿ ಇಬ್ಬರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

 ಸಂದರ್ಶನ ನಡೆಯುವ ಸ್ಥಳ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಯು ಸ್ಮಾಲ್ ಬ್ಯಾಂಕ್ ಲಿಮಿಟೆಡ್. 1ನೇ ಮಹಡಿ ಗಜಾನನ ಕಾಂಪ್ಲೆಕ್ಸ್, ಸಂಡೂರು ಇಲ್ಲಿ ನಡೆಯಲಿದೆ.

ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳಿಗೆ ದ್ವಿಚಕ್ರ ವಾಹನ ಇರುವುದು ಕಡ್ಡಾಯವಾಗಿದೆ.

ಸಂದರ್ಶನದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಯೊಂದಿಗೆ ನಿಗದಿತ ಸಮಯಕ್ಕೆ ಸಂದರ್ಶನ ಸ್ಥಳದಲ್ಲಿ ಹಾಜರಿರಬೇಕು.ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಲ್ಯಾಣ ಹಾಗೂ ಸ್ವಯಂ ಉದ್ಯೋಗ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.03 ಕೊನೆಯ ದಿನವಾಗಿದೆ. ವಯೋಮಿತಿಯು ಯೋಜನೆಗಳ ಆಧಾರದ ಮೇಲೆ ಕನಿಷ್ಠ 18 ವರ್ಷದಿಂದ ಗರಿಷ್ಠ 55 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಾರ್ಷಿಕ ಆದಾಯ ಮಿತಿ: ಗ್ರಾಮೀಣ ಪ್ರದೇಶದ ಅರ್ಜಿದಾರರಿಗೆ ಗರಿಷ್ಠ ರೂ. 98,000, ನಗರ ಪ್ರದೇಶದ ಅರ್ಜಿದಾರರಿಗೆ ಗರಿಷ್ಠ ರೂ. 1,20,000. ಒಟ್ಟು ಸೌಲಭ್ಯಗಳಲ್ಲಿ ಮಹಿಳೆಯರಿಗೆ ಶೇ. 33 ಹಾಗೂ ವಿಕಲಚೇತನರಿಗೆ ಶೇ. 5 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.

 ಯೋಜನೆಗಳ ವಿವರ:

ಶ್ರೀ ಶಹಜಿರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯ ಧನ), ಜೀಜಾವು ಜಲಭಾಗ್ಯ (ಗಂಗಾ ಕಲ್ಯಾಣ ಯೋಜನೆ) ಈ ಯೋಜನೆಯಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು, ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ಮರಾಠ ಮಿಲ್ಟ್ರಿ  ಹೋಟೆಲ್, ಸ್ವಾವಲಂಬಿ ಸಾರಥಿ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ಸಾಲ ಯೋಜನೆ (ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.15 ಲಕ್ಷಗಳ ಮಿತಿಯಲ್ಲಿರಬೇಕು), ಸ್ವಾತಂತ್ರ ಅಮೃತ ಮುನ್ನಡೆ ಯೋಜನೆ(ಈ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಬೇಕು).

 ಹೊಲಿಗೆ ಯಂತ್ರ/ಜೀಗ್ ಜ್ಯಾಗ್ ಯೋಜನೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ನಿಗದಿತ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ನಿಗಮದ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08392-267038 ಅನ್ನು ಸಂಪರ್ಕಿಸಬಹುದು ಎಂದು ನಿಗಮದ ಬಳ್ಳಾರಿ/ವಿಜಯನಗರ ಜಿಲ್ಲಾ ವ್ಯವಸ್ಥಾಪಕ ಎನ್. ಹೊನ್ನೂರಪ್ಪ ಅವರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular