HomeIndiaಆಗಸ್ಟ್ 23 `ರಾಷ್ಟ್ರೀಯ ಬಾಹ್ಯಾಕಾಶ ದಿನ’ : ಪ್ರಧಾನಿ ಮೋದಿ ಘೋಷಣೆ

ಆಗಸ್ಟ್ 23 `ರಾಷ್ಟ್ರೀಯ ಬಾಹ್ಯಾಕಾಶ ದಿನ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಆಗಸ್ಟ್ ರಂದು ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ. ಭಾರತವು ಈ ದಿನವನ್ನು ರಾಷ್ಟ್ರೀಯ ಬಾಹ್ಯಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಕರೆಯೋಣ, ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ. ಚಂದ್ರಯಾನ-3 ಯಶಸ್ವಿಯಾದ ದಿನ ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದರು. ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಮಾತನಾಡುವಾಗ ಅವರು ಈ ಘೋಷಣೆ ಮಾಡಿದರು.ಚಂದ್ರಯಾನ-3 ಯಶಸ್ಸಿಗೆ ಮಹಿಳಾ ವಿಜ್ಞಾನಿಗಳ ಕೊಡುಗೆಯೂ ಇದೆ ಎಂದು ಮಹಿಳಾ ವಿಜ್ಞಾನಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ ಎಂದು ಮೋದಿ ಹೇಳಿದರು. ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ ಎಂದು ಮೋದಿ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular