HomeLive Newsಇಂದು ನಡೆಯಲಿದೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಏಕದಿನ ಪಂದ್ಯ

ಇಂದು ನಡೆಯಲಿದೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಏಕದಿನ ಪಂದ್ಯ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಪಂದ್ಯಗಳು ಭರ್ಜರಿ ಮನರಂಜನೆ ನೀಡುತ್ತಿದ್ದು, ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ಇಂಗ್ಲೆಂಡ್ ಮೂರನೇ ಏಕದಿನ ಪಂದ್ಯದಲ್ಲಿ 46 ರನ್ ಗಳಿಂದ ಜಯಭೇರಿಯಾಗುವ ಮೂಲಕ ಕಮ್ ಬ್ಯಾಕ್ ಮಾಡಿದೆ.

ಇಂದು ಲಂಡನ್ ನಲ್ಲಿ ನಾಲ್ಕನೇ ಏಕದಿನ ಪಂದ್ಯ ನಡೆಯಲಿದ್ದು, ಇಂಗ್ಲೆಂಡ್ ತಂಡ ಸರಣಿಯನ್ನು ಸಮ ಬಲಗೊಳಿಸುವ ನಿರೀಕ್ಷೆಯಲ್ಲಿದೆ. ಇನ್ನು ಆಸ್ಟ್ರೇಲಿಯಾ ತಂಡ ಈ ಪಂದ್ಯವನ್ನು ಗೆದ್ದರೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದ್ದು, ಇಂದು ಯಾವ ತಂಡ ಜಯಭೇರಿ ಯಾಗಲಿದೆ ಕಾದು ನೋಡಬೇಕಾಗಿದೆ. ಆಸ್ಟ್ರೇಲಿಯಾ ತಂಡದ ಓಪನಿಂಗ್ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್ ಕಳೆದ ಪಂದ್ಯದಲ್ಲಿ ಅಲಭ್ಯರಾಗಿದ್ದು, ಈ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

For Latest News Updates, Join Our Whatsapp Community🚩
RELATED ARTICLES

Most Popular