HomeKarnatakaಜೋಶ್ ಇಂಗ್ಲಿಸ್ ಸ್ಪೋಟಕ ಶತಕ: ಮೊದಲ ಟಿ20ಯಲ್ಲಿ ಭಾರತ ಗೆಲುವಿಗೆ ಬೃಹತ್ ಮೊತ್ತ

ಜೋಶ್ ಇಂಗ್ಲಿಸ್ ಸ್ಪೋಟಕ ಶತಕ: ಮೊದಲ ಟಿ20ಯಲ್ಲಿ ಭಾರತ ಗೆಲುವಿಗೆ ಬೃಹತ್ ಮೊತ್ತ

ವಿಶಾಖಪಟ್ಟಣ: ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಭರ್ಜರಿ ಜಯಗಳಿಸಿ ಚಾಂಪಿಯನ್ ಆದ ಆಸ್ಟ್ರೇಲಿಯಾ ಇಂದು ಮೊದಲ ಟಿ20 ಪಂದ್ಯದಲ್ಲಿ ಬೃಹತ್ ಮೊತ್ತ ಕಲೆ ಹಾಕಿದೆ.

ವಿಶಾಖ ಪಟ್ಟಣದ ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದೆ. ಜೋಶ್ ಇಂಗ್ಲಿಸ್ ಸ್ಪೋಟಕ ಶತಕ ಸಿಡಿಸಿದ್ದಾರೆ. 50 ಎಸೆತಗಳಲ್ಲಿ 11 ಬೌಂಡರಿ, 8 ಸಿಕ್ಸರ್ ಸಹಿತ 110 ರನ್ ಗಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಟೀವನ್ ಸ್ಮಿತ್ 52, ಮ್ಯಾಥ್ಯೂ ಶಾರ್ಟ್ 13, ಜೋಶ್ ಇಂಗ್ಲಿಸ್ 110, ಮಾರ್ಕಸ್ ಸ್ಟೋನಿಯಸ್ ಅಜೇಯ 7, ಟಿಮ್ ಡೇವಿಡ್ ಅಜೇಯ 19 ರನ್ ಗಳಿಸಿದರು. ಭಾರತದ ಪರ ಪ್ರಸಿದ್ಧ್ ಕೃಷ್ಣ 1, ರವಿ ಬಿಷ್ಣೊಯಿ 1 ವಿಕೆಟ್ ಪಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular