BREAKING NEWS: ಶಾಪಿಂಗ್ ಮಾಲ್ ಗೆ ನುಗ್ಗಿ ಐವರನ್ನು ಚಾಕುವಿನಿಂದ ಇರಿದು ಕೊಂದ ದುಷ್ಕರ್ಮಿ

ಸಿಡ್ನಿ: ಶಾಪಿಂಗ್ ಮಾಲ್ ಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಯೊಬ್ಬ ಐರನ್ನು ಚಾಕುವುನಿಂದ ಇರಿದು ಹತ್ಯೆ ಮಾಡಿರುವ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲಿ ನಡೆದಿದೆ.

ಸಿಡ್ನಿ ನಗರದಲ್ಲಿರುವ ಶಾಪಿಂಗ್ ಮಾಲ್ ಗೆ ಬಂದ ದುಷ್ಕರ್ಮಿ ಜನರ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ. ಅಲ್ಲದೇ ಚಾಕುವಿನಿಂದ ಇರಿದು ಐವರನ್ನು ಬರ್ಬರವಾಗಿ ಕೊಲೆಗೈದಿದ್ದಾನೆ. ದುಷ್ಕರ್ಮಿಯ ಅಟ್ಟಹಾಸಕ್ಕೆ ಜನರು ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಸಿಡ್ನಿ ಪೊಲೀಸರು ದುಷ್ಕರ್ಮಿಯನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read