ಸಿಎಂ ಸಿದ್ದರಾಮಯ್ಯ ಭೇಟಿಯಾದ ‘ಆಸ್ಟ್ರೇಲಿಯನ್ ಹೈಕಮಿಷನರ್’ ಫಿಲಿಪ್ ಗ್ರೀನ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು ತಮ್ಮನ್ನು ಭೇಟಿಯಾದ ನವದೆಹಲಿಯಲ್ಲಿನ ಆಸ್ಟ್ರೇಲಿಯನ್ ಹೈಕಮಿಷನರ್ ಫಿಲಿಪ್ ಗ್ರೀನ್ ಅವರೊಂದಿಗೆ ಮಾತುಕತೆ ನಡೆಸಿದರು.

ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯ ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಇಬ್ಬರು ಮಾತುಕತೆ ನಡೆಸಿದರು.

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಮಾಡಲು ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ನಮ್ಮಲ್ಲಿ ವಿಫುಲ ಅವಕಾಶಗಳಿವೆ. ರಾಜ್ಯದಲ್ಲಿ ನಗರ ಸಾರಿಗೆ, ಗ್ರೀನ್ ಫೀಲ್ಡ್ ರೋಡ್ ಕಾರಿಡಾರ್ ಮೊದಲಾದ ವಲಯಗಳಲ್ಲಿ ಹೂಡಿಕೆ ಮಾಡಬಹುದು. ಇದಲ್ಲದೆ ಬೆಂಗಳೂರು ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ತಂತ್ರಜ್ಞಾನ ನಗರಿ, ಜ್ಞಾನ ನಗರಿ ಎಂದೆಲ್ಲ ಹೆಸರುವಾಸಿಯಾಗಿದೆ. ಕೌಶಲ್ಯಯುಕ್ತ ಮಾನವಸಂಪನ್ಮೂಲ ಹಾಗೂ ಅಕುಶಲ ಮಾನವ ಸಂಪನ್ಮೂಲವೂ ಇಲ್ಲಿ ಲಭ್ಯವಿದ್ದು, ಹೂಡಿಕೆಗೆ ಕರ್ನಾಟಕ ಪ್ರಶಸ್ತ ತಾಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read