ಆಸ್ಟ್ರಿಯಾದ ಗ್ರಾಜ್ ಶಾಲೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, 11 ಜನರು ಸಾವನ್ನಪ್ಪಿದ್ದಾರೆ.
ಗ್ರಾಜ್ ಶಾಲೆಯ ಎರಡು ಕೊಠಡಿಗಳಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 11 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.