ರಾಯಚೂರು: ಆಟೋ ಪಲ್ಟಿಯಾಗಿ ಬಿದ್ದ ಪರಿಣಾಮ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ನಲ್ಲಿ ನಡೆದಿದೆ.
ಅನುಶ್ರೀ (5) ಮೃತ ಬಾಲಕಿ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಛತ್ರ ಗ್ರಾಮದ ಮಾರುತೇಶ್ವರ ದೇಗುಲಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಚಾಲಕ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಆಟೋದಲ್ಲಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿ ಯರಗುಂಟಾ ಗ್ರಾಮದ ನಿವಾಸಿ.
ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.