HomeIndiaBIG NEWS: ಡಿವೈಡರ್ ಗೆ ಆಟೋ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಡಿವೈಡರ್ ಗೆ ಆಟೋ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಥಾಣೆ: ಆಟೋವೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭೀವಂಡಿ ಪ್ರದೇಶದಲ್ಲಿ ನಡೆದಿದೆ.

ವೇಗವಾಗಿ ಬಂದ ಆಟೋ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಸತೀಶ್ ಜಾದವ್ (45), ಕಿಶೋರ್ ಪಾಟೀಲ್ (44) ಮೃತರು. ಭೀವಂಡಿ ತಾಲೂಕು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular