ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಆಟೋ ಚಾಲಕನನ್ನು ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಹನುಮಂತಪ್ಪ ಹೆಚ್.ತಳವಾರ ಎಂದು ಗುರುತಿಸಲಾಗಿದೆ. ಯುವತಿಯೊಬ್ಬಳು ಜೆ.ಪಿ.ನಗರದ ಏಳನೇ ಹಂತದಿಂದ ಆಟೋ ಬುಕ್ ಮಾಡಿದ್ದಳು. ಆಟೋ ಲೊಕೇಷನ್ ಗೆ ಬಂದಾಗ ಯುವತಿ ಆಟೋದಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಆಟೋ ಚಾಲಕ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ನೀನು ಥೇಟ್ ಹಿರೋಯಿನ್ ತರಹ ಇದ್ದೀಯಾ ಎಂದು ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಭಯಗೊಂಡ ಯುವತಿ ಆತನಿಂದ ತಪ್ಪಿಸಿಕೊಂಡು ಓಡಿಹೋಗಿದ್ದಾಳೆ.ಘಟನೆ ಸಂಬಂಧ ಯುವತಿ ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾಮುಕ ಆಟೋ ಚಾಲಕನ್ನು ಪೊಲೀಸರು ಬಂಧಿಸಿದ್ದಾರೆ.
You Might Also Like
TAGGED:ಆಟೋ ಚಾಲಕ