ದಾವಣಗೆರೆ: ವಿದ್ಯಾರ್ಥಿನಿ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆಟೋ ಚಾಲಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35,000 ರೂ. ದಂಡ ವಿಧಿಸಿ ದಾವಣಗೆರೆ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ.-1 ನ್ಯಾಯಾಲಯ ಆದೇಶಿಸಿದೆ.
ದಾವಣಗೆರೆಯ ಆಟೋಚಾಲಕ ವಸಂತ ನವೇರಾ(23) ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು ಪಿಯುಸಿ ಓದುತ್ತಿದ್ದ ಬಾಲಕಿಯನ್ನು ಅಪರಿಸಿದ ವಸಂತ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನಲ್ಲಿ ಮನೆಯೊಂದಕ್ಕೆ ಕರೆದೊಯ್ದು ಹಲವು ಬಾರಿ ದೈಂಗಿಕ ದೌರ್ಜನ್ಯ ಎಸಗಿದ್ದ.
ಬಾಲಕಿ ಕಾಣೆಯಾದ ಬಗ್ಗೆ ಆಕೆಯ ತಂದೆ ಮಹಿಳಾ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆಯವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಸಂತನಿಗೆ ಶಿಕ್ಷೆ ವಿಧಿಸಿದ್ದಾರೆ. ಅಪರಾಧಿಯಿಂದ ವಸೂಲಿ ಮಾಡಿದ 35,000 ರೂ. ಜೊತೆಗೆ ಸಂತ್ರಸ್ತೆಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರಕ್ಕೆ ಸೂಚಿಸಿದ್ದಾರೆ.