HomeLive NewsBIG NEWS: ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಕಾರಣ ಬಿಚ್ಚಿಟ್ಟ ಮಹಿಳೆ!

BIG NEWS: ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಕಾರಣ ಬಿಚ್ಚಿಟ್ಟ ಮಹಿಳೆ!

ಬೆಂಗಳೂರು: ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಪೊಲೀಸರ ಮುಂದೆ ಕಾರಣ ತಿಳಿಸಿದ್ದಾರೆ.

ಬಿಹಾರ ಮೂಲದ ಪನ್ಸೂರಿ ಎಂಬ ಮಹಿಳೆ ಬೆಂಗಳೂರಿನ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಮೇ 28ರಂದು ಆಟೋ ಚಾಲಕನಿಗೆ ಚಪ್ಪಲಿಂದ ಥಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ಆಟೋ ಚಾಲಕ ಲೋಕೇಶ್ ಬೆಳ್ಳಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಂದು ಹಲ್ಲೆ ನಡೆಸಿದ ಮಹಿಳೆಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಹಿಳೆ, ತಾನು ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಟೋ ಹಿಂಬದಿಯಿಂದ ಬಂದು ಬೈಕ್ ಗೆ ಡಿಕ್ಕಿಹೊಡೆದಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕ ಗಲಾಟೆ ಮಾಡಿ ಹಲ್ಲೆಗೆ ಮುಂದಾಗಿದ್ದಾನೆ. ಇದರಿಂದ ಕೋಪಗೊಂಡು ತಾನು ಆತನಿಗೆ ಹೊಡೆದಿದ್ದೇನೆ ಎಂದು ಮಹಿಳೆ ಹೇಳಿಕೆ ನೀಡಿದ್ದಾರೆ.

ಮಹಿಳೆಯಿಂದ ಹೇಳಿಕೆ ದಾಖಲಿಸಿಕೊಂಡು ಠಾಣೆಯಿಂದ ಕಳುಹಿಸಿದ್ದಾಗಿ ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular