HomeLatest Newsಅಪಘಾತದಲ್ಲಿ ಆಟೋ ಚಾಲಕನ ಮೆದುಳು ನಿಷ್ಕ್ರಿಯ: ಪತಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ನಿ

ಅಪಘಾತದಲ್ಲಿ ಆಟೋ ಚಾಲಕನ ಮೆದುಳು ನಿಷ್ಕ್ರಿಯ: ಪತಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ನಿ

ಚಿಕ್ಕಮಗಳೂರು: ಆಟೋ ಅಪಘಾತದಲ್ಲಿ ಚಾಲಕನ ಮೆದುಳು ನಿಷ್ಕ್ರಿಯವಾಗಿದ್ದ ಹಿನ್ನೆಲೆಯಲ್ಲಿ ಅಂಗಾಂಗಳನ್ನು ಕುಟುಂಬದ ಸದಸ್ಯರು ದಾನ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ. ಚಾಲಕ ಮಂಜುನಾಥ್ ಅಪಘಾತದಲ್ಲಿ ಗಾಯೊಂಡು ಮೆದುಳು ನಿಷ್ಕ್ರಿಯವಾಗಿದ್ದ ಹಿನ್ನೆಲೆ ಶಸ್ತ್ರಚಿಕಿತ್ಸೆಯ ಮೂಲಕ ದೇಹದಿಂದ ಅಂಗಾಂಗಗಳನ್ನು ವೈದ್ಯರು ಹೊರಗೆ ತೆಗೆದಿದ್ದಾರೆ.

 ಮಣಿಪಾಲ್ ಆಸ್ಪತ್ರೆಯ ವೈದ್ಯರ ತಂಡ ಅಂಗಾಂಗಗಳನ್ನು ಹೊರಗೆ ತೆಗೆದಿದೆ. ಕೊಪ್ಪ ಪಟ್ಟಣದಿಂದ ಜೀರೋ ಟ್ರಾಫಿಕ್ ನಲ್ಲಿ ಮಂಗಳೂರಿನ ಎಜೆ ಆಸ್ಪತ್ರೆಗೆ, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಅಂಗಾಂಗಗಳನ್ನು ವೈದ್ಯರ ತಂಡ ರವಾನೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 2ರಂದು ಆಟೋ ಪಲ್ಟಿಯಾಗಿ ಚಾಲಕ ಮಂಜುನಾಥ್ ತಲೆಗೆ ಪೆಟ್ಟಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುದುರೆಗುಂಡಿಯ ಸಮೀಪ ಅಪಘಾತ ಸಂಭವಿಸಿತ್ತು. ಬೆಳ್ಳೂರಿನ ಆಟೋ ಚಾಲಕ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದರು. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಕುಟುಂಬ ಸದಸ್ಯರು ಚಿಕಿತ್ಸೆ ಕೊಡಿಸಿದ್ದರು. ಆದರೆ, ಬ್ರೈನ್ ಡೆಡ್ ಆದ ಕಾರಣ ನಿನ್ನೆ ಕೊಪ್ಪದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.

ಪತಿ ಸಾವಿನಲ್ಲಿಯೂ ಪತ್ನಿ ಮತ್ತು ಕುಟುಂಬ ಸದಸ್ಯರು ಸಾರ್ಥಕತೆ ಮೆರೆದಿದ್ದಾರೆ. ಮಂಜುನಾಥ್ ದುಡಿಮೆಯಲ್ಲಿ ಪತ್ನಿ, ಇಬ್ಬರು ಮಕ್ಕಳು ಜೀವನ ಸಾಗಿಸುತ್ತಿದ್ದರು. ಆದರೆ, ಮಂಜುನಾಥನನ್ನು ಕಳೆದುಕೊಂಡು ಇಡೀ ಕುಟುಂಬ ಕಂಗಾಲಾಗಿದೆ. ಆರ್ಥಿಕ ನೆರವಿನ ನಿರೀಕ್ಷೆಯಲ್ಲಿ ಮಂಜುನಾಥನ ಕುಟುಂಬ ಸದಸ್ಯರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular