HomeLatest Newsಬಾಲಕನಿಗೆ ಆಟೋ ಕೊಟ್ಟ ಮಾಲೀಕನಿಗೆ ಬಿಗ್ ಶಾಕ್: ಬರೋಬ್ಬರಿ 1.45 ಕೋಟಿ ರೂ. ದಂಡ ವಿಧಿಸಿದ...

ಬಾಲಕನಿಗೆ ಆಟೋ ಕೊಟ್ಟ ಮಾಲೀಕನಿಗೆ ಬಿಗ್ ಶಾಕ್: ಬರೋಬ್ಬರಿ 1.45 ಕೋಟಿ ರೂ. ದಂಡ ವಿಧಿಸಿದ ಕೋರ್ಟ್

ಕೊಪ್ಪಳ: ಬಾಲಕನೊಬ್ಬ ಆಟೋ ಚಾಲನೆ ಮಾಡುವಾಗ ಅಪಘಾತ ಎಸಗಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದಕ್ಕೆ ಆಟೋ ಮಾಲೀಕನಿಗೆ 1.41 ಕೋಟಿ ರೂಪಾಯಿ ದಂಡ ವಿಧಿಸಿ ಕೊಪ್ಪಳ ಜಿಲ್ಲೆ ಗಂಗಾವತಿಯ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

2021ರ ಮಾರ್ಚ್ 10ರಂದು ಯಲಬುರ್ಗಾದಲ್ಲಿ ಅಪಘಾತ ಸಂಭವಿಸಿತ್ತು. ಯಲಬುರ್ಗಾದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಗಂಗಾವತಿ ನಿವಾಸಿ ರಾಜಶೇಖರ ಪಾಟೀಲ್ ಅಪಘಾತದಲ್ಲಿ ಮೃತಪಟ್ಟಿದ್ದರು. ಆಟೋ ಚಾಲನೆ ಮಾಡುತ್ತಿದ್ದ 17 ವರ್ಷದ ಬಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣವೆಂದು ದೂರು ನೀಡಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ ಎಸ್ ಗಾಣಿಗೇರ ಅವರು ಬಾಲಕನಿಗೆ ಆಟೋ ಚಾಲನೆ ಮಾಡಲು ಕೊಟ್ಟಿದ್ದ ಮಾಲೀಕನಿಗೆ ಭಾರೀ ಮೊತ್ತದ ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ರಾಜಶೇಖರ ಪಾಟೀಲ್ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular