ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು: 200 ಆಟೋ ವಶಕ್ಕೆ

ಶಿವಮೊಗ್ಗ: ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ ವಶಕ್ಕೆ ಪಡೆದಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, Area Domination ಭಾಗವಾಗಿ  ವಾಹನ ತಪಾಸಣೆ ಮಾಡಿ ಲಘು ಪ್ರಕರಣ, IMV  ಪ್ರಕರಣ ಮತ್ತು ಡಿ.ಡಿ. ಪ್ರಕರಣಗಳನ್ನು ದಾಖಲಿಸಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read