HomeLatest Newsಅವಶ್ಯಕ ಪೂರಕ ದಾಖಲೆಗಳೊಂದಿಗೆ ಕಾರ್ಯಾಚರಣೆಗೆ ಆಟೋ ರಿಕ್ಷಾ ಮಾಲೀಕರಿಗೆ ಸೂಚನೆ

ಅವಶ್ಯಕ ಪೂರಕ ದಾಖಲೆಗಳೊಂದಿಗೆ ಕಾರ್ಯಾಚರಣೆಗೆ ಆಟೋ ರಿಕ್ಷಾ ಮಾಲೀಕರಿಗೆ ಸೂಚನೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮತ್ತು ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಆಟೋ ರಿಕ್ಷಾ ಕ್ಯಾಬ್ ಗಳು ಪ್ರಾದೇಶಿಕ ಸಾರಿಗೆ ವ್ಯಾಪ್ತಿಯಲ್ಲಿ ಸಂಚರಿಸಲು ಅವಶ್ಯವಿರುವ ದಾಖಲಾತಿಗಳನ್ನು ಸಿಂಧುಗೊಳಿಸಿಕೊಂಡು ಕಾರ್ಯಾಚರಣೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ. ಕಾಳಿಸಿಂಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ ಮತ್ತು ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಆಟೋರಿಕ್ಷಾ ಕ್ಯಾಬ್ ಗಳು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ವ್ಯಾಪ್ತಿಯಲ್ಲಿ ಸಂಚರಿಸಲು ಅವಶ್ಯವಿರುವ ದಾಖಲಾತಿಗಳಾದ ರಹದಾರಿ, ವಾಹನದ ವಿಮೆ ಪತ್ರ, ಅರ್ಹತಾ ಪತ್ರ, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹಾಗೂ ವಾಹನ ಚಾಲನೆ ಮಾಡುವ ಚಾಲಕರು ಚಾಲನಾ ಅನುಜ್ಞಾ ಪತ್ರ, ಬ್ಯಾಡ್ಜ್ ಅನ್ನು ವಾಯಿದೆ ಹೊಂದಿರುವಂತೆ ಸಿಂಧುಗೊಳಿಸಿಕೊಂಡಿರಬೇಕು.

 ಪೊಲೀಸ್ ಇಲಾಖೆಯವರಿಂದ ನೀಡಲ್ಪಡುವ ಗುರುತಿನ ಸಂಖ್ಯೆಯನ್ನು ಪಡೆದು, ಸಂಬಂಧಪಟ್ಟ ತಾಲ್ಲೂಕು, ಹೋಬಳಿ ಹಾಗೂ ಜಿಲ್ಲಾ ಕೇಂದ್ರದಲ್ಲಿ ವಾಹನ ಕಾರ್ಯಾಚರಣೆ ಮಾಡಲು ಆಟೋರಿಕ್ಷಾ ವಾಹನ ಮಾಲೀಕರು /ಚಾಲಕರುಗಳಿಗೆ ಸೂಚನೆ ನೀಡಲಾಗಿದೆ. ಇವಿಷ್ಟೂ ದಾಖಲೆಗಳನ್ನು ಸಿಂಧುಗೊಳಿಸಿಕೊಂಡು ಕಾರ್ಯಾಚರಣೆ ಮಾಡಲು 2026ರ ಜನವರಿ ಅಂತ್ಯದವರೆಗೆ ಕಾಲಮಿತಿ ನಿಗದಿಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರದ ಅವಧಿಯಲ್ಲಿ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಯಿಂದ ಜಂಟಿ ಪ್ರವರ್ತನಾ ಕಾರ್ಯ ಕೈಗೊಳ್ಳುವ ಸಂದರ್ಭದಲ್ಲಿ ರಹದಾರಿ, ವಾಹನದ ವಿಮೆ ಪತ್ರ, ಅರ್ಹತಾ ಪತ್ರ, ಸಿಂಧುವಾಗಿರದೇ ಇರುವ ದಾಖಲಾತಿಗಳು, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಹಾಗೂ ಚಾಲನಾ ಅನುಜ್ಞಾ ಪತ್ರ ಹೊಂದಿರದ ವಾಹನ ಚಾಲಕರು, ಸಿಂಧುವಾಗಿರುವ ದಾಖಲೆಗಳನ್ನು ಹೊಂದಿರದ ವಾಹನಗಳು ಪತ್ತೆಯಾದಲ್ಲಿ, ಅಂತಹ ವಾಹನಗಳನ್ನು ಜಪ್ತು ಮಾಡಿ, ಮೊಟಾರು ವಾಹನ ಕಾಯ್ದೆ 1988 ರ ಕಲಂ 200 ರ ಅಡಿ ದಂಡ ವಿಧಿಸಿ, ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ. ಕಾಳಿಸಿಂಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular