HomeEntertainment'ಅವತಾರ ಪುರುಷ 2' ಚಿತ್ರದ ವಿಡಿಯೋ ಹಾಡು ರಿಲೀಸ್

‘ಅವತಾರ ಪುರುಷ 2’ ಚಿತ್ರದ ವಿಡಿಯೋ ಹಾಡು ರಿಲೀಸ್

2022 ರಲ್ಲಿ ವಿಡಿಯೋ ಹಾಡು ರಿಲೀಸ್‌ ಆಗಿದ್ದ ಶರಣ್ ಅಭಿನಯದ ‘ಅವತಾರ ಪುರುಷ 2’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಸಿನಿ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು, ಇದೀಗ ಇದರ ಮುಂದುವರೆದ ಭಾಗ ತೆರೆ ಮೇಲೆ ಬರಲು ಸಜ್ಜಾಗಿದೆ.

‘ಅವತಾರ ಪುರುಷ 2’  ಚಿತ್ರದ ”ಇವನೇ ಅವತಾರ ಪುರುಷ” ಎಂಬ ವಿಡಿಯೋ ಹಾಡೊಂದನ್ನು, ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಎಂಸಿ ಬಿಚ್ಚು ಮತ್ತು ಅಭಿನಂದನ್ ಕಶ್ಯಪ್ ಈ ಹಾಡಿಗೆ ಧ್ವನಿಯಾಗಿದ್ದು, ಅಭಿನಂದನ್ ಕಶ್ಯಪ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ಈ ಚಿತ್ರದಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿದ್ದು, ಪುಷ್ಕರ್ ಮಲ್ಲಿಕಾರ್ಜುನಯ್ಯ ತಮ್ಮ ಪುಷ್ಕರ್ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಮನು ಸಂಕಲನ, ಮತ್ತು ವಿಕ್ರಂ ಸಾಹಸ ನಿರ್ದೇಶನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular