HomeKarnataka‘ಶುಚಿ’ ಯೋಜನೆಯಡಿ 40 ಕೋಟಿ ರೂ. ವೆಚ್ಚದಲ್ಲಿ 19.30 ಲಕ್ಷ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ ಕಿನ್...

‘ಶುಚಿ’ ಯೋಜನೆಯಡಿ 40 ಕೋಟಿ ರೂ. ವೆಚ್ಚದಲ್ಲಿ 19.30 ಲಕ್ಷ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ ಕಿನ್ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಮುಟ್ಟಿನ ಶುಚಿತ್ವದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶುಚಿ ಕಾರ್ಯಕ್ರಮ ರೂಪಿಸಲಾಗಿದ್ದು, ಅದರಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ.

40 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲಾ/ಕಾಲೇಜುಗಳ 10 ರಿಂದ 18 ವಯೋಮಾನದ 19.30ಲಕ್ಷ ವಿದ್ಯಾರ್ಥಿನಿಯರಿಗೆ ಶಾಲೆ ಮತ್ತು ಹಾಸ್ಟೆಲ್‌ ಗಳಲ್ಲಿ ಸ್ಯಾನಿಟರಿ ನ್ಯಾಪ್‌ ಕಿನ್ ಪ್ಯಾಡ್ ವಿತರಣೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಪರಿಷತ್‌ ನಲ್ಲಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಶುಚಿ ಕಾರ್ಯಕ್ರಮದಡಿ ಹದಿಹರೆಯದವರಲ್ಲಿ ಋತುಸ್ರಾವದ ಶುಚಿತ್ವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹದಿಹರೆಯದವರಿಗೆ ಸ್ಯಾನಿಟರಿ ನ್ಯಾಪಕಿನ್ ಬಳಕೆ ಹಾಗೂ ಉಪಯೋಗಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ. ಸಮುದಾಯ ಮತ್ತು ವಿಶೇಷವಾಗಿ ಹದಿಹರೆಯದವರಲ್ಲಿ ಋತುಸ್ರಾವ ನೈರ್ಮಲ್ಯದ ಕುರಿತು ದೃಷ್ಟಿಕೋನ ಬದಲಾಯಿಸಲಾಗುತ್ತಿದೆ. ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಒದಗಿಸುವುದರ ಮುಖಾಂತರ ಬಳಕೆಯನ್ನು ಪ್ರೋತ್ಸಾಹಿಸುವುದು ಹಾಗೂ ಮುಟ್ಟಿನ ವೈಜ್ಞಾನಿಕ ನಿರ್ವಹಣೆಯ ಕುರಿತು ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular