HomeKarnatakaಇಬ್ಬರು ಎಂಎಲ್‌ಸಿಗಳ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿಜೆಪಿಗೆ ಮತ್ತೆ ಶಾಕ್: ‘ಕೈ’ ಹಿಡಿಯಲಿದ್ದಾರೆ ಮತ್ತಿಬ್ಬರು ಬಿಜೆಪಿ...

ಇಬ್ಬರು ಎಂಎಲ್‌ಸಿಗಳ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿಜೆಪಿಗೆ ಮತ್ತೆ ಶಾಕ್: ‘ಕೈ’ ಹಿಡಿಯಲಿದ್ದಾರೆ ಮತ್ತಿಬ್ಬರು ಬಿಜೆಪಿ ಶಾಸಕರು…?

ವಿಧಾನಸಭೆ ಚುನಾವಣೆ ಹೊತ್ತಲ್ಲಿ ನಿರೀಕ್ಷೆಯಂತೆ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಹಾಗೂ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ಬಿಜೆಪಿಯ ಮತ್ತಿಬ್ಬರು ವಿಧಾನ ಪರಿಷತ್ ಸದಸ್ಯರು ಕೈ ಹಿಡಿಯಲು ಸಜ್ಜಾಗಿದ್ದಾರೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಮೊದಲು ಬಿಜೆಪಿಯಲ್ಲಿದ್ದ ಆಯನೂರು ಮಂಜುನಾಥ್ ಜನತಾ ಪಕ್ಷ, ನಂತರ ಕಾಂಗ್ರೆಸ್ ಪಕ್ಷ ಬಳಿಕ ಬಿಜೆಪಿಗೆ ಮರಳಿದ್ದರು. ಈಗ ಮತ್ತೆ ಅವರು ಕಾಂಗ್ರೆಸ್ ಸೇರ್ಪಡೆಯಾಗಿ ಶಿವಮೊಗ್ಗ ನಗರದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್. ಶಂಕರ್ ಕೂಡ ಕಾಂಗ್ರೆಸ್ ಸೇರಲು ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular