ಬಿಜೆಪಿ ಮತ್ತೊಂದು ವಿಕೆಟ್ ಪತನ: ಆಯನೂರು ಮಂಜುನಾಥ್ ರಾಜೀನಾಮೆ ಸಾಧ್ಯತೆ

ಶಿವಮೊಗ್ಗ: ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಬೆಳಗ್ಗೆ 8 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಬಿಜೆಪಿ ಟಿಕೆಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದ ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈಶ್ವರಪ್ಪ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಆಯನೂರು ನಿಲುವಿನಲ್ಲಿ ಬದಲಾವಣೆ ಆಗಬಹುದೆಂದು ಹೇಳಲಾಗಿತ್ತು. ಅವರ ವಿರುದ್ಧ ಕ್ರಮಕ್ಕೆ ಪಕ್ಷದ ಜಿಲ್ಲಾ ಸಮಿತಿ ಶಿಫಾರಸು ಮಾಡಿದ್ದು, ಆಯನೂರು ಮಂಜುನಾಥ್ ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಆಯನೂರು ಮಂಜುನಾಥ್ ಮಾತುಕತೆ ನಡೆಸಿದ್ದಾರೆ. ಇಂದು ಅವರು ಪಕ್ಷ ತೊರೆದು ಜೆಡಿಎಸ್ ನಿಂದ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read