ಜ. 22ರಂದು ಮದ್ಯದಂಗಡಿ ಬಾಗಿಲು; ಮಹತ್ವದ ಸೂಚನೆ ನೀಡಿದ ಯುಪಿ ಸರ್ಕಾರ

ರಾಮನಗರಿಯಲ್ಲಿ ಜನವರಿ 22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭವು ಇತಿಹಾಸ ಪುಟದಲ್ಲಿ  ಅಚ್ಚೊತ್ತಲಿದೆ.  ಉತ್ತರ ಪ್ರದೇಶ ಸರ್ಕಾರವು ಈ ದಿನವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. ಇದಕ್ಕೆ ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ಹಾಗೆ ಮದ್ಯಪ್ರಿಯರಿಗೆ ಮಹತ್ವದ ಸುದ್ದಿಯೊಂದನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ.

ಜನವರಿ 22 ಅನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಲು  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ. ಈ ದಿನ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ. ಜನವರಿ 22 ರಂದು ಡ್ರೈ ಡೇಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಮದ್ಯದಂಗಡಿಗಳನ್ನು ಮುಚ್ಚುವಂತೆ ಸಿಎಂ ನೀಡಿರುವ ಆದೇಶವನ್ನು ಅಯೋಧ್ಯೆಯ ಸಂತರು ಶ್ಲಾಘಿಸಿದ್ದಾರೆ.

ಪ್ರತಿ ವರ್ಷ ಜನವರಿ 22 ರಂದು ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಬೇಕು ಎಂದು ಅಯೋಧ್ಯೆಯ ಸಂತರು ಯೋಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ದಿನದಂದು ದೇಶಾದ್ಯಂತ ಆಚರಿಸುವಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read