SHOCKING: ಮನೆಗೆ ನುಗ್ಗಿ ಮಲಗಿದ್ದ ಮಹಿಳೆ ಮೇಲೆ ಆಸಿಡ್ ಎರಚಿದ ಕಿಡಿಗೇಡಿ: ಮದುವೆ ನಿಲ್ಲಿಸಿದ್ದಕ್ಕೆ ದುಷ್ಕೃತ್ಯ

ಅಯೋಧ್ಯೆ: ಅಯೋಧ್ಯೆಯ ಹೈದರ್‌ ಗಂಜ್ ಪ್ರದೇಶದಲ್ಲಿ ಮಹಿಳೆಯ ಮೇಲೆ ಆಸಿಡ್ ಎಸೆದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ.

ಮದುವೆ ರದ್ದುಗೊಳಿಸಿದ ನಂತರ ಆರೋಪಿ ಈ ಕೃತ್ಯ ಎಸಗಿದ್ದಾನೆ. ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಲಕ್ನೋ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ. 25ರ ಹರೆಯದ ಯುವಕ ಸೋಮವಾರ ತಡರಾತ್ರಿ 20 ವರ್ಷದ ಮಹಿಳೆಯ ಮನೆಗೆ ಹೋಗಿ ಮಲಗಿದ್ದಾಗ ಆಕೆಯ ಮೇಲೆ ಆಸಿಡ್ ಎರಚಿದ್ದಾನೆ.

ಅಯೋಧ್ಯಾ ರೇಂಜ್ ಇನ್ಸ್ಪೆಕ್ಟರ್ ಜನರಲ್ ಪ್ರವೀಣ್ ಕುಮಾರ್ ಪ್ರಕಾರ, ಇನಾಯತ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ರಾಜ್ ಕರನ್ ಶರ್ಮಾ ಸಂತ್ರಸ್ತೆ ಮತ್ತು ಆಕೆಯ ಕುಟುಂಬಕ್ಕೆ ಪರಿಚಿತರಾಗಿದ್ದ. ಮಹಿಳೆಯೊಂದಿಗಿನ ತನ್ನ ಮದುವೆಯನ್ನು ರದ್ದುಗೊಳಿಸಿದ್ದರಿಂದ ಆರೋಪಿ ಅಸಮಾಧಾನಗೊಂಡಿದ್ದ ಎಂದು ತಿಳಿಸಿದ್ದಾರೆ.

ನಾವು ಎರಡು ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುತ್ತೇವೆ ಮತ್ತು 15 ರಿಂದ 20 ದಿನಗಳಲ್ಲಿ ನಾವು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಐಜಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read