BIG NEWS : ಇಂದಿನಿಂದ ಸಾರ್ವಜನಿಕರಿಗೆ ಅಯೋಧ್ಯೆ ರಾಮಮಂದಿರ ಮುಕ್ತ, ಪಾಸ್ ಹಾಗೂ ದರ್ಶನದ ಬಗ್ಗೆ ಇಲ್ಲಿದೆ ಮಾಹಿತಿ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ನಿನ್ನೆ ಬಾಲರಾಮನ ಪ್ರಾಣ ಪ್ರತಿಷ್ಟಾಪನೆ ಯಶಸ್ವಿಯಾಗಿ ನಡೆದಿದ್ದು, ಪ್ರಧಾನಿ ಮೋದಿ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿಸಿದ್ದರು.

ಮಂಗಳವಾರದಿಂದ ಮಂದಿರ ದರ್ಶನಕ್ಕೆ ಶ್ರೀಸಾಮಾನ್ಯ ಭಕ್ತಾದಿಗಳಿಗೆ ಅವಕಾಶ ಸಿಗಲಿದ್ದು, ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಜನರು ದರ್ಶನ ಪಡೆಯುವ ನಿರೀಕ್ಷೆಯಿದೆ.

ಅಯೋಧ್ಯೆ ರಾಮಮಂದಿರ ಬೆಳಗ್ಗೆ 7 ರಿಂದ 11:30 ಹಾಗೂ ಮಧ್ಯಾಹ್ನ 2ರಿಂದ ಸಂಜೆ 7ರವರೆಗೆ ಭಕ್ತರ ದರ್ಶನಕ್ಕೆ ಮುಕ್ತವಾಗಿರುತ್ತದೆ. ಬೆಳಗ್ಗೆ 7:30 ಕ್ಕೆ ಶೃಂಗಾರ ಆರತಿ, ರಾತ್ರಿ 7.30ಕ್ಕೆ ಸಂಧ್ಯಾ ಆರತಿ ನಡೆಯುತ್ತದೆ. ಈ ಆರತಿಯನ್ನು ನೋಡಲು ಬಯಸುವವರು ಪಾಸ್‌ಗಳನ್ನು ಪಡೆಯಬೇಕು.

ಆಫ್ಲೈನ್ ಮತ್ತು ಆನ್ಲೈನ್ ಮೂಲಕ ಆರತಿ ಅಥವಾ ದರ್ಶನಕ್ಕಾಗಿ ಪಾಸ್ಗಳನ್ನು ಪಡೆಯಬಹುದಾಗಿದ್ದು, ಅಯೋಧ್ಯಾ ರಾಮ ಮಂದಿರ ಜಾಲತಾಣಕ್ಕೆ ಲಾಗಿನ್ ಆಗಿ ನೀವು ಪಾಸ್ ಗೆ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ನಿಮ್ಮ ಮೊಬೈಲ್ ನಂಬರ್ ಎಂಟ್ರಿ ಮಾಡಿ, ನಂತರ ನಿಮ್ಮ ಮೊಬೈಲ್ಗೆ ಕಳುಹಿಸಲಾಗುವ ಒಟಿಪಿ ಮೂಲಕ ನಿಮ್ಮ ಗುರುತು ದೃಢೀಕರಿಸಬೇಕಾಗುತ್ತದೆ. ಬಳಿಕ ಮೈ ಪ್ರೊಫೈಲ್ ಸೆಕ್ಷನ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಸಮಯವನ್ನು ಆಯ್ಕೆ ಮಾಡಿ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ, ಈ ಮೂಲಕ ಹೀಗೆ ನಿಮ್ಮ ಪಾಸ್ ಅನ್ನು ಆನ್ಲೈನ್ ಮೂಲಕ ಪಡೆದುಕೊಳ್ಳಬಹುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read