ಜ. 22ರಂದು ರಾಮ ಮಂದಿರ ಉದ್ಘಾಟನೆ ದಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ಆಗ್ರಹ

ಯಾದಗಿರಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ದಿನವಾದ ಜನವರಿ 22ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಬೇಕೆಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಮನವಿ ಮಾಡಿದ್ದಾರೆ.

ಜಿಲ್ಲಾಡಳಿತಕ್ಕೆ ಪತ್ರ ಬರೆದಿರುವ ಅವರು, ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿರುವುದು ದೇಶದ ನಿವಾಸಿಗಳಲ್ಲಿ ಅಭಿಮಾನದ ಸಂಗತಿಯಾಗಿದೆ. ಅಯೋಧ್ಯೆ ಭಾರತದ ಅಭಿವೃದ್ಧಿ, ಪರಂಪರೆಯ ಸಂಕೇತವಾಗಿದೆ. ಶ್ರೀ ರಾಮನ ಆದರ್ಶ ಪ್ರೇರಣೆಯಾಗಿದ್ದು, ಯುವ ಪೀಳಿಗೆಗೆ ತಿಳಿಯಪಡಿಸಬೇಕಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳು ಅಭೂತಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದ್ದು, ಅಂದು ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಬೇಕು. ಶ್ರೀರಾಮಚಂದ್ರನ ಜೀವನ ವೃತ್ತಾಂತ ಸಾರುವ ಕಿರು ಚಿತ್ರವನ್ನು ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರದರ್ಶಿಸಬೇಕು. ಅಯೋಧ್ಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read