ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ : ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಮಹಾಮಂಗಳಾರತಿ, ವಿಶೇಷ ಪೂಜೆಗೆ ಅಧಿಕೃತ ಆದೇಶ

ಬೆಂಗಳೂರು : ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿರುವ ಜನವರಿ 22ರಂದು ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ:22.01.2024 ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿರುವುದರಿಂದ, ದೇಶದ/ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ:22.01.2024 ರಂದು ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ಪ್ರಾರ್ಥನ/ ಮಂಗಳಾರತಿಯನ್ನು ನಡೆಸಲು ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read