HomeLatest NewsBIG NEWS: ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ದೇಣಿಗೆ ಕಳ್ಳತನ ಹಗರಣ: ಪ್ರಧಾನ ಕಾರ್ಯದರ್ಶಿ ಚಂಪತ್...

BIG NEWS: ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ದೇಣಿಗೆ ಕಳ್ಳತನ ಹಗರಣ: ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿ ಇಬ್ಬರು ರಾಜೀನಾಮೆ

ಲಕ್ನೋ: ಅಯೋಧ್ಯೆ ಶ್ರೀ ರಾಮ ಮಂದಿರ ಟ್ರಸ್ಟ್‌ನ ದೇಣಿಗೆ ಹಾಗೂ ಕಾಣಿಕೆ ಕಳ್ಳತನ ಹಗರಣ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಪ್ರಕರಣದಲ್ಲಿ ನೇರವಾಗಿ ಹೆಸರಿಸಲಾದ 8 ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ (PA) ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಟ್ರಸ್ಟ್‌ನ ಇಬ್ಬರು ಪ್ರಮುಖ ಉನ್ನತ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಎಸ್ ಐಟಿ ನಡೆಸಿದ ತೀವ್ರ ಕಾರ್ಯಾಚರಣೆಯ ನಂತರ ಎಂಟು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಬಂಧನದ ಬೆಳವಣಿಗೆಯಿಂದಾಗಿ ಟ್ರಸ್ಟ್‌ನ ಆಡಳಿತ ಮಂಡಳಿಯ ಮೇಲೆ ಭಾರಿ ಒತ್ತಡ ಉಂಟಾಗಿತ್ತು. ಇದರ ಬೆನ್ನಲ್ಲೇ. ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಟ್ರಸ್ಟ್‌ನ ಪ್ರಮುಖ ಸದಸ್ಯರಾದ ಅನಿಲ್ ಮಿಶ್ರಾ ರಾಜೀನಾಮೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜೀನಾಮೆಗೆ ಕಾರಣ ಬಂಧಿತ ಆರೋಪಿಗಳೆಲ್ಲರೂ ದೇವಸ್ಥಾನದ ಕಾಣಿಕೆ ಮತ್ತು ನಗದು ಹಣವನ್ನು ಎಣಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದ ಸಿಬ್ಬಂದಿಯಾಗಿದ್ದರು. ಸ್ವತಃ ಚಂಪತ್ ರಾಯ್ ಅವರ ಅತ್ಯಂತ ಆಪ್ತ ಸಹಾಯಕನೇ ಸಿಸಿಟಿವಿ ಸಾಕ್ಷ್ಯಗಳ ಆಧಾರದ ಮೇಲೆ ಜೈಲು ಪಾಲಾಗಿರುವುದರಿಂದ, ಇಡೀ ಹಗರಣದ ನೈತಿಕ ಹೊಣೆ ಹೊತ್ತು ಅಥವಾ ತನಿಖೆಯ ತೀವ್ರತೆಗೆ ಹೆದರಿ ಈ ಇಬ್ಬರು ಪ್ರಮುಖರು ರಾಜೀನಾಮೆ ನೀಡುವ ಮೂಲಕ ಟ್ರಸ್ಟ್‌ನಿಂದ ಹೊರನಡೆದಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನವೇ ಈ ಹಗರಣ ಆಡಳಿತಾರೂಢ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ತಂದೊಡ್ಡಿದೆ. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಈ ಕಳ್ಳತನದ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದವು ಹಾಗೂ ಉನ್ನತ ಅಧಿಕಾರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿದ್ದವು.

ಈಗ ಟ್ರಸ್ಟ್‌ನ ಇಬ್ಬರು ಪ್ರಮುಖರು ರಾಜೀನಾಮೆ ನೀಡಿರುವುದರಿಂದ ವಿರೋಧ ಪಕ್ಷಗಳ ಆರೋಪಗಳಿಗೆ ಮತ್ತಷ್ಟು ಬಲ ಬಂದಂತಾಗಿದೆ. ಮತ್ತೊಂದೆಡೆ ಹಗರಣ ಸಂಬಂಧ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular