HomeIndiaBIG NEWS: ಅಯೋದ್ಯೆ ಬಳಿ ಭೀಕರ ಅಪಘಾತ: ಕಲಬುರಗಿ ಮೂಲದ ಮೂವರು ಭಕ್ತರು ದುರ್ಮರಣ

BIG NEWS: ಅಯೋದ್ಯೆ ಬಳಿ ಭೀಕರ ಅಪಘಾತ: ಕಲಬುರಗಿ ಮೂಲದ ಮೂವರು ಭಕ್ತರು ದುರ್ಮರಣ

ಲಖನೌ: ಲಾರಿ ಹಾಗೂ ಟಿಟಿ ವಾಹನದ ನಡುವೆ ಅಯೋಧ್ಯೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ ಮೂಲದ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಿವರಾಜ್, ಕಾಶಿನಾಥ್ ಹಾಗೂ ತಂಗೆಮ್ಮ ಮೃತ ದುರ್ದೈವಿಗಳು. ಅಪಘಾತದಲ್ಲಿ ಟಿಟಿಯಲ್ಲಿದ್ದ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಅಯೋಧ್ಯೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಮೂಲದ ಒಂದೇ ಕುಟುಂಬದ 22 ಜನರು ಕಾಶಿ ಹಾಗೂ ಅಯೋಧ್ಯೆ ಯಾತ್ರೆಗೆ ತೆರಳಿದ್ದರು. ಕಾಶಿ ವಿಶ್ವನಾಥನ ದರ್ಶನ ಪಡೆದ ಬಳಿಕ ಟಿಟಿಯಲ್ಲಿ ಕಾಶಿಯಿಂದ ಅಯೋಧ್ಯೆಗೆ ತೆರಳುತ್ತಿದ್ದರು. ಈ ವೇಳೆ ತಡರಾತ್ರಿ ಅಯೋಧ್ಯೆ ಬಳಿ ಟಿಟಿ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular