HomeIndiaಅಯೋಧ್ಯೆ ರಾಮ ಮಂದಿರದಲ್ಲಿ ಮೊಬೈಲ್ ಫೋನ್ ಸಂಪೂರ್ಣ ನಿಷೇಧ

ಅಯೋಧ್ಯೆ ರಾಮ ಮಂದಿರದಲ್ಲಿ ಮೊಬೈಲ್ ಫೋನ್ ಸಂಪೂರ್ಣ ನಿಷೇಧ

ಅಯೋಧ್ಯೆ ರಾಮ ಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ರಾಮ ಮಂದಿರ ಟ್ರಸ್ಟ್ ನ ಪದಾಧಿಕಾರಿಗಳು, ಐಜಿ ಹಾಗೂ ಕಮಿಷ್ನರ್ ಗಳ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ಮುಂದೆ ಅಯೋಧ್ಯೆ ರಾಮ ಮಂದಿರ ಆವರಣದಲ್ಲಿ ಮೊಬೈಲ್ ಫೋನ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ದೇವಸ್ಥಾನದಲ್ಲಿ ಸಾರ್ವಜನಿಕರು, ಮೊಬೈಲ್ ಕೊಂಡೊಯ್ಯುವುದನ್ನು ಈಗಾಗಲೇ ನಿಷೇಧಿಸಲಾಗಿತ್ತು. ಇದೀಗ ವಿಐಪಿಗಳು, ವಿವಿಐಪಿಗಳು ಕೂಡ ಮೊಬೈಲ್ ಫೋನ್ ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಸ್ಟಿ ಅನಿಲ್ ಮಿಶ್ರಾ ತಿಳಿಸಿದ್ದಾರೆ. ಎಲ್ಲಾ ಸಂದರ್ಶಕರು ಈ ವ್ಯವಸ್ಥೆಯನ್ನು ಅನುಸರಿಸಬೇಕು. ಹಾಗೂ ಯಾವುದೇ ಅನಾನುಕೂಲತೆಯುಂಟಾಗದಂತೆ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular