HomeLatest Newsಅಯೋಧ್ಯೆ ರಾಮ ಮಂದಿರ ದೇಣಿಗೆ ಕಳ್ಳತನ ವಿವಾದ: ರಾಮ ಮಂದಿರ ಟ್ರಸ್ಟ್, ಕೇಂದ್ರ ಸರ್ಕಾರಕ್ಕೆ ಸುಪ್ರೀಂ...

ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳ್ಳತನ ವಿವಾದ: ರಾಮ ಮಂದಿರ ಟ್ರಸ್ಟ್, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ

ನವದೆಹಲಿ: ಅಯೋಧ್ಯೆ ರಾಮ ಮಂದಿರ ದೇಣಿಗೆ ಹಾಗೂ ಕಾಣಿಕೆ ಹಣ ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಮ ಮಂದಿರ ಟ್ರಸ್ಟ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (SIT) ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಒಂದು ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿದಾರರು ತನಿಖಾ ವರದಿಯನ್ನು ನೋಡಲು ಬಯಸಿದ್ದು, ಈ ಹಿನ್ನೆಲೆಯಲ್ಲಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ನ್ಯಾಯಾಲಯ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಲು ಸಿದ್ಧ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿದೆ. ಈ ಮಧ್ಯೆ, ಎಸ್ಐಟಿ ಇದುವರೆಗೆ ಎಷ್ಟು ಜನರ ವಿಚಾರಣೆ ನಡೆಸಿದೆ ಮತ್ತು ಈವರೆಗಿನ ತನಿಖೆಯಲ್ಲಿ ಪತ್ತೆಯಾದ ವಿಚಾರವೇನು? ಎಂಬ ಮಾಹಿತಿ ನೀಡುವಂತೆಯೂ ಸುಪ್ರೀಂ ಕೋರ್ಟ್ ಆದೇಶಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular