HomeLatest NewsGOOD NEWS: ಆಯುಷ್ ವೈದ್ಯಾಧಿಕಾರಿಗಳ ಮುಂಬಡ್ತಿಗೆ ಕ್ರಮ; ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆಗೂ ಸಮ್ಮತಿ

GOOD NEWS: ಆಯುಷ್ ವೈದ್ಯಾಧಿಕಾರಿಗಳ ಮುಂಬಡ್ತಿಗೆ ಕ್ರಮ; ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆಗೂ ಸಮ್ಮತಿ

ಬೆಳಗಾವಿ: ಆಯುಷ್ ಇಲಾಖೆಯಲ್ಲಿನ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವರು, ಆಯುಷ್ ಇಲಾಖೆಯಲ್ಲಿ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ಮೂಲಕ ಒಟ್ಟು 95 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಇದರಲ್ಲಿ 65 ಆಯುರ್ವೇದ, 15-ಯುನಾನಿ, 12-ಹೋಮಿಯೋಪಥಿ ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ 03 ವೈದ್ಯರಿಗೆ ಮುಂಬಡ್ತಿ ನೀಡಬೇಕಿದೆ. ಇಲಾಖೆಯಲ್ಲಿ 116 ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಕಳೆದ ಆರೇಳು ವರ್óಗಳಿಂದ ಹಿರಿಯ ವೈದ್ಯಾಧಿಕಾರಿಗಳ ವೃಂದದಲ್ಲಿ ಹುದ್ದೆಗಳು ಖಾಲಿ ಇವೆ. ವೈದ್ಯಾಧಿಕಾರಿಗಳಿಗೆ ಸ್ಥಾನಪನ್ನ ಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಳಿಕ ಮುಂಬಡ್ತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular