‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನ ಪಡೆಯಲು ಸೂಕ್ತ ಹಿಂಬರಹ ನೀಡಬಹುದು. ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ರೆಫರಲ್ ನೀಡುವ ಹಂತದಲ್ಲಿ ಈ ಹಿಂಬರಹ ನೀಡಬಹುದಾಗಿದೆ ಎಂದು ಆರೋಗ್ಯ ಇಲಾಖೆ ಆದೇಶಿಸಿದೆ.
ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯ ಇರುವುದರಿಂದ ಇವುಗಳ ಬಳಕೆ ಅವಕಾಶದಿಂದ ಯಶಸ್ವಿನಿ ಯೋಜನೆ ಫಲಾನುಭವಿಗಳು ವಂಚಿತವಾಗಬಾರದು. ಹೀಗಾಗಿ ಇದನ್ನು ಮನಗಂಡು ಯಶಸ್ವಿನಿ ಯೋಜನೆ ಫಲಾನುಭವಿಗಳು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಅಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ನೀಡಿರುವ ಅನುಮತಿ ಮುಂದುವರೆಯಲಿದೆ. ಆದರೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಡ್ಡಾಯವಾಗಿ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಗೆ ಹಂಚಿಕೊಳ್ಳಬೇಕು. ಆರೋಗ್ಯ ಇಲಾಖೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ದರದಲ್ಲಿ ಚಿಕಿತ್ಸಾ ವೆಚ್ಚ ಮರುಪಾವತಿಸಲು ಕ್ಲೇಮ್ ಸಲ್ಲಿಸಬೇಕು. ಯಶಸ್ವಿನಿ ಕಾರ್ಡ್ ದಾರರಿಗೆ ಹಿಂಬರಹ ಕೊಡಲು ತಿಳಿಸಲಾಗಿದೆ.