HomeKarnatakaಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆಗೆ ಆಯುಷ್ಮಾನ್ ಕಾರ್ಡ್ ಪಡೆಯಲು ಸೂಚನೆ

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆಗೆ ಆಯುಷ್ಮಾನ್ ಕಾರ್ಡ್ ಪಡೆಯಲು ಸೂಚನೆ

ಮಡಿಕೇರಿ: ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಯೋಜನ ಪಡೆಯಲು ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ಹತ್ತಿರದ ಗ್ರಾಮ ಒನ್‍ನಿಂದ ರೇಷನ್‍ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ನೀಡಿ ಉಚಿತವಾಗಿ ಪಡೆಯುವಂತೆ ತಿಳಿಸಲಾಗಿದೆ.

ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೂ ಎಪಿಎಲ್ ಫಲಾನುಭವಿಗಳಿಗೆ 1.50 ಲಕ್ಷ ರೂ.ವರೆಗೂ ಸಹ ಪಾವತಿ ಆಧಾರದಲ್ಲಿ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕಾರ್ಡ್‍ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆ ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ ಕಾರ್ಡ್‍ನ್ನು 14 ಸಂಖ್ಯೆಯ ಆಭಾ ಹೆಲ್ತ್ ಐಡಿಯೊಂದಿಗೆ ಸಂಯೋಜಿಸಲಾಗಿದೆ. ಕಾರ್ಡ್ ಇದ್ದರೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಮಾತ್ರ ರೆಫರಲ್ ಆಧಾರದ ಮೇಲೆ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 104 ಅಥವಾ 14555 ಕ್ಕೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular