ಮಹಿಳೆಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆಯುಷ್ಮತಿ ಕ್ಲಿನಿಕ್ ಪ್ರಾರಂಭ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 95 ಆಯುಷ್ಮತಿ ಕ್ಲಿನಿಕ್ ಗಳನ್ನು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ವರ್ಚುವಲ್ ಮೂಲಕ ಬೆಂಗಳೂರಿನಿಂದ  ಉದ್ಘಾಟನೆ ಮಾಡಲಿದ್ದಾರೆ.

ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ತಜ್ಞ ವೈದ್ಯರಿಂದ ಪ್ರತಿ ದಿನಾ ಮಹಿಳೆಯರ ಆರೋಗ್ಯ ತಪಾಷಣೆ ಮಾಡಲಾಗುತ್ತದೆ. ಶಿವಮೊಗ್ಗದಲ್ಲಿ ಪ್ರಸೂತಿ ಆರೋಗ್ಯ ಕೇಂದ್ರ ತುಂಗಾನಗರದಲ್ಲಿ ಉದ್ಘಾಟನಾ ಸಮಾರಂಭ  ಕಾರ್ಯಕ್ರಮ ಏರ್ಪಡಿಸಲಾಗಿದೆ.

ಮಾ. 27 ರಂದು ಬೆಳಿಗ್ಗೆ 11.30 ಗಂಟೆಗೆ ಶಿವಮೊಗ್ಗ ಜಿಲ್ಲೆಯ ನಾಲ್ಕು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶಿವಮೊಗ್ಗದಲ್ಲಿ ತುಂಗಾನಗರ, ಸೀಗೆಹಟ್ಟಿ, ಬೊಮ್ಮನಕಟ್ಟೆ ಹಾಗೂ ಭದ್ರಾವತಿ ತಾಲ್ಲೂಕಿನ ಅಶ್ವಥನಗರಗಳಲ್ಲಿ ಮಹಿಳೆಯರ ವಿಶೇಷ ಆರೋಗ್ಯ ತಪಾಷಣೆಗಾಗಿ ಆಯುಷ್ಮತಿ ಕ್ಲಿನಿಕ್ ಪ್ರಾರಂಭಿಸಲಾಗುತ್ತಿದೆ.

ಮಹಿಳೆಯರು ಈ ಆಯುಷ್ಮತಿ ಕ್ಲಿನಿಕ್ ಗೆ ಭೇಟಿನೀಡಿ ತಜ್ಞ ವೈದ್ಯರ ಸೇವೆ ಪಡೆದುಕೊಳ್ಳುವ0ತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, RCH ಅಧಿಕಾರಿ ಡಾ. ನಾಗರಾಜ ನಾಯ್ಕ್ ಕೋರಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read