HomeKarnatakaSHOCKING NEWS: ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

SHOCKING NEWS: ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಉಡುಪಿ: ಕೆಂಡ ಸೇವೆ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡದ ಮೇಲೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ವೇಳೆ ನಡೆದಿದೆ.

ಪ್ರತಿವರ್ಷದಂತೆ ಈ ವರ್ಷವೂ ಅಯ್ಯಪ್ಪ ಮಾಲಾಧಾರಿಗಳು ಕೆಂಡಸೇವೆ ಮಾಡುತ್ತಿದ್ದರು. ಅಯ್ಯಪ್ಪ ಮಾಲಾಧಾರಿಗಳು ಒಂದು ಬದಿಯಿಂದ ಇನ್ನೊಂದು ಬದಿಗೆ ಕೆಂಡದ ಮೇಲೆ ಕುಪ್ಪಳಿಸುತ್ತಾ ಸಾಗಿದ್ದರು. ಈ ವೇಳೆ ಓರ್ವ ಮಾಲಾಧಾರಿ ಆಯತಪ್ಪಿ ನಿಗಿ ನಿಗಿ ಕೆಂಡದ ಮೇಲೆ ಬಿದ್ದಿದ್ದಾನೆ.

ನೆರೆದಿದ್ದ ಜನರು ತಕ್ಷಣ ಆತನ ರಕ್ಷಣೆಗೆ ಧಾವಿಸಿದ್ದಾರೆ. ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular